ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿಗೆ ಬಂದವು ಎಲೆಕ್ಟ್ರಿಕ್ ಬಸ್

ಬೆಂಗಳೂರು : ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯ ತಡೆಗೆ ಮುಂದಾಗಿರುವ ಸರ್ಕಾರ ಎಲೆಕ್ಟ್ರಿಕ್ ಬಸ್ ಗಳನ್ನು ಓಡಿಸಲು ಮುಂದಾಗಿದೆ. ಸದ್ಯ ಬೆಂಗಳೂರಿನಲ್ಲಿ ಇಂದಿನಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಶುರುವಾಗಿದೆ.

ಎನ್ ಟಿಪಿಸಿ ಮತ್ತು ಜೆಬಿಎಂ ಆಟೋ ಕಂಪೆನಿಗಳು ಜಂಟಿಯಾಗಿ 9 ಮೀಟರ್ ಉದ್ದದ 90 ನಾನ್-ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಒದಗಿಸುವ ಕೆಲಸವನ್ನು ವಹಿಸಿಕೊಂಡಿವೆ. ಇಂದು ಸಾರಿಗೆ ಸಚಿವ ಶ್ರೀರಾಮುಲು ಕೆಂಗೇರಿ ಬಸ್ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್ ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಉದ್ಘಾಟನೆ ಬಳಿಕ ಸಚಿವರು ಎಲೆಕ್ಟ್ರಿಕ್ ಬಸ್ ನಲ್ಲಿ ನಗರ ಪ್ರದಕ್ಷಿಣೆ ಮಾಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಮೊದಲ ಬಸ್ ಗೆ ಇಂದು ಚಾಲನೆ ದೊರೆತಿದೆ. ಮೊದಲ ಹಂತದಲ್ಲಿ 300 ಎಲೆಕ್ಟ್ರಿಕ್ ಬಸ್ ಗಳಿಗೆ ಬಿಎಂಟಿಸಿ ಗುತ್ತಿಗೆ ನೀಡಿದೆ. ಎಲೆಕ್ಟ್ರಿಕ್ ಬಸ್ಗೆ 45 ನಿಮಿಷ ಚಾರ್ಜ್ ಮಾಡಿದರೆ 225 ಕಿ.ಮೀ ಸಂಚಾರ ಮಾಡಲಿದೆ.

ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ 90 ಬಸ್ ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು 2020ರ ಫೆಬ್ರುವರಿಯಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಲೆಕ್ಟ್ರಿಕ್ ಬಸ್ ನಲ್ಲಿ ಸುಮಾರು 30 - 35 ಪ್ರಯಾಣಿಕರು ಕುಳಿತುಕೊಳ್ಳುವ ವ್ಯವಸ್ಥೆ ಇದೆ. ಈ ಎಲೆಕ್ಟ್ರಿಕ್ ಬಸ್ ಗಳನ್ನು ಮುಖ್ಯವಾಗಿ ಈ ಮೆಟ್ರೋ ನಿಲ್ದಾಣಗಳಲ್ಲಿ ಬರುವಂತಹ ಪ್ರಯಾಣಿಕರಿಗೆ ಬೇರೆ ಏರಿಯಾಗಳಿಗೆ ಪ್ರಯಾಣಿಸಲು ಅನುಕೂಲವಾಗಲು ಬಳಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ 15ರೊಳಗೆ ಉಳಿದಂತಹ 89 ಎಲೆಕ್ಟ್ರಿಕ್ ಬಸ್ಗಳನ್ನು ಹಂತ ಹಂತವಾಗಿ ಒದಗಿಸುವುದಾಗಿ ತಿಳಿಸಿದ್ದಾರೆ ಎಂದೂ ಹೇಳಿದ್ದಾರೆ.

Edited By : Manjunath H D
PublicNext

PublicNext

30/09/2021 01:30 pm

Cinque Terre

97.9 K

Cinque Terre

1