ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3ಸಾವಿರ ಕೋಟಿ ರೂ. ಅನುದಾನ

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮೂರು ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬಳ್ಳಾರಿ ನಗರದ ಆರ್. ವೈ. ಎಂ. ಇ. ಸಿ ಕಾಲೇಜು ಆವರಣದಲ್ಲಿ ಇರುವ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್, ವಿ.ವಿಸಂಘದ‌ ಕಿಂಡರ್ ಗಾರ್ಡನ್ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮತ್ತು ಎಸ್.ಕೆ.ಮೋದಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುತ್ತೇವೆ. ಪ್ರಸ್ತುತ ನೀಡುತ್ತಿರುವ 1500 ಕೋಟಿ ರೂ. ಅನುದಾನದ ಬದಲಿಗೆ, 3000 ಕೋಟಿ ಅನುದಾನ ನೀಡಲು ಬದ್ಧರಿದ್ದೇವೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

03/10/2021 03:10 pm

Cinque Terre

39.29 K

Cinque Terre

0

ಸಂಬಂಧಿತ ಸುದ್ದಿ