ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ವಿದ್ಯುತ್ ಕಡಿತ ಇಲ್ಲ, ಶೀಘ್ರದಲ್ಲಿ ಕಲ್ಲಿದ್ದಲು ಪೂರೈಕೆ ಆಗಲಿದೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸಚಿವರ ಭೇಟಿ ಬಳಿಕ 2 ರೇಕ್ ಕಲ್ಲಿದ್ದಲು ಬರುತ್ತಿದೆ. ಇನ್ನೂ ಎರಡು ರೇಕ್ ಕಲ್ಲಿದ್ದಲು​ ಕೊಡುವುದಾಗಿ ಹೇಳಿದ್ದಾರೆ. ನಾವು ಪೇಮೆಂಟ್​ ಮಾಡಿದ ತಕ್ಷಣ ಪೂರೈಕೆ ಪ್ರಕ್ರಿಯೆ ನಡೆಯುತ್ತದೆ. ರಾಜ್ಯದಲ್ಲಿ ವಿದ್ಯುತ್ ಪೂರೈಕೆ​ ಸ್ಥಗಿತ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ನಿಂತಿಲ್ಲ. ತೆಲಂಗಾಣ ಮುಖ್ಯಮಂತ್ರಿ ಜೊತೆಗೂ ಮಾತಾಡುತ್ತಿದ್ದೇನೆ. 10-12 ರೇಕ್ ಕಲ್ಲಿದ್ದಲು​ ನೀಡುವ ಕುರಿತು ಚರ್ಚಿಸಲಾಗುತ್ತಿದೆ. ಹೆಸ್ಕಾಂ ಆರ್ಥಿಕ ಸಫಲತೆ ಕಾಣಬೇಕು ಎಂದು ಅವರು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

13/10/2021 07:46 am

Cinque Terre

34.74 K

Cinque Terre

0

ಸಂಬಂಧಿತ ಸುದ್ದಿ