ನವದೆಹಲಿ: ಸಾರಿಗೆ ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿ ಉದ್ದೇಶಕ್ಕಾಗಿ ₹ 100 ಲಕ್ಷ ಕೋಟಿ ವೆಚ್ಚದ ‘ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಯೋಜನೆ'ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ.
ಸರಕು ಸಾಗಣೆ ನಿರ್ವಹಣೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ‘ಸಾರಿಗೆ ವೆಚ್ಚವನ್ನು ತಗ್ಗಿಸುವುದು ಮತ್ತು ಆರ್ಥಿಕತೆಯನ್ನು ವೃದ್ಧಿಸುವುದೇ ಈ ಯೋಜನೆಯ ಗುರಿ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ವಿವಿಧ ಇಲಾಖೆಗಳ ಕಾರ್ಯಗಳನ್ನು ಒಂದೇ ವೇದಿಕೆಯಡಿ ತರಲು ಈ ಯೋಜನೆ ಒತ್ತು ನೀಡಲಿದ್ದು, ಈ ಕಾರ್ಯಕ್ಕೆ ವೇಗ ನೀಡಲಾಗುವುದು. ವಿವಿಧ ಸಚಿವಾಲಯಗಳು ಹಾಗೂ ರಾಜ್ಯಗಳಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಸಮನ್ವಯವಾಗುವಂತೆ ಉದ್ದೇಶಿಸಿ ಯೋಜನೆ ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
PublicNext
13/10/2021 04:14 pm