ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಎಲ್ಲ ವಿಧಾನ ಸಭೆ ಕ್ಷೇತ್ರಗಳಲ್ಲಿ ಪಶು ಸಂಜೀವಿನಿ ಯೋಜನೆ: ಪ್ರಭು ಚವ್ಹಾಣ್

ಬೆಳಗಾವಿ: ರಾಜ್ಯದ 224 ಕ್ಷೇತ್ರಗಳಲ್ಲೂ ಶೀಘ್ರದಲ್ಲಿ ಪಶು ಸಂಜೀವಿನಿ ಯೋಜನೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಈ ವರ್ಷದಲ್ಲಿ 224 ಕ್ಷೇತ್ರಗಳಲ್ಲೂ ಪಶು ಸಂಜೀವಿನಿ ಯೋಜನೆ ಪ್ರಾರಂಭಿಸುತ್ತಿದ್ದೇವೆ. ಕಾಲುಬಾಯಿ ರೋಗಕ್ಕೆ ಈಗಾಗಲೇ 12 ಜಿಲ್ಲೆಗಳಲ್ಲಿ ಔಷಧಿ ರವಾನಿಸಿದ್ದು, ತಿಂಗಳಾಂತ್ಯದ ಒಳಗೆ ಎಲ್ಲ ಜಿಲ್ಲೆಗಳಿಗೂ ಒದಗಿಸಲಾಗುವುದು. ರಾಜ್ಯದಲ್ಲಿ ಪಶುವೈದ್ಯರ ಕೊರತೆ ಇಲಾಖೆಯನ್ನು ತೀವ್ರವಾಗಿ ಕಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರವೇ ಪಶುವೈದ್ಯರ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

14/12/2021 07:31 am

Cinque Terre

58.7 K

Cinque Terre

0

ಸಂಬಂಧಿತ ಸುದ್ದಿ