ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್‌ಡಿಸಿಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಅಗತ್ಯಕ್ಕೆ ಅನುಗುಣವಾಗಿ, ಸಂಚಾರ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ರೂಪಿಸಬೇಕು. ಬಿಡುಗಡೆ ಗೊಳಿಸಿದ ಅನುದಾನದ ಗರಿಷ್ಠ ಸದ್ಬಳಕೆಯಾಗಬೇಕು ಎಂದು ಸೂಚಿಸಿದರು.
ರಾಜ್ಯವ್ಯಾಪಿ ವಿವಿಧ ಎಂಜಿನಿಯರಿಂಗ್ ಇಲಾಖೆಗಳ ಏಕ ರೂಪ ದರಪಟ್ಟಿಯನ್ನು ಲೋಕೋಪಯೋಗಿ ಇಲಾಖೆಯಡಿ ಜಾರಿಗೆ ತರಲಾಗುತ್ತಿದ್ದು, ಇದರಂತೆಯೇ ಸರ್ಕಾರಿ ಕಟ್ಟಡಗಳಲ್ಲಿ ಬಳಕೆಯಾಗುವ ವಸ್ತುಗಳಿಗೆ ಕೂಡ ಏಕರೂಪ ದರಪಟ್ಟಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.ರಾಜ್ಯ ಹೆದ್ದಾರಿಗಳು ಜಿಲ್ಲಾ ಮುಖ್ಯ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಯೋಜನೆಯಾಗಬೇಕು. ಇದಕ್ಕೆ ಪೂರಕವಾಗಿ ರಸ್ತೆ ತಜ್ಞರಿಂದ ಮಾಸ್ಟರ್ ಪ್ಲಾನ್ ಸಿದ್ಧ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
PublicNext
02/02/2022 11:00 pm