ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇಕೆದಾಟು ಯೋಜನೆಗಾಗಿ 2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ ಇಂದಿನಿಂದ

ಬೆಂಗಳೂರು: ಮೇಕೆದಾಟು ನೀರಿನ ಯೋಜನೆ ಜಾರಿಗಾಗಿ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 2ನೇ ಹಂತದ ಪಾದಯಾತ್ರೆ ಇಂದಿನಿಂದ ಆರಂಭವಾಗಲಿದೆ. ಇದಕ್ಕಾಗಿ ಕಾಂಗ್ರೆಸ್ ಎಲ್ಲ ರೀತಿಯ ತಯಾರಿಗಳನ್ನು ನಡೆಸಿಕೊಂಡಿದೆ. ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜನತೆಗೆ ಮನವಿ ಮಾಡಿದ್ದಾರೆ.

ಈ ಪಾದಯಾತ್ರೆಯ ಸಮಾರೋಪ ಸಮಾರಂಭದ ಬೃಹತ್ ಸಮಾರಂಭಕ್ಕೆ, ಬಿಬಿಎಂಪಿಯಿಂದ ಅನುಮತಿ ದೊರೆತಿದೆ. ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೇಕೆದಾಟು ಪಾದಯಾತ್ರೆಯ ಬೃಹತ್ ಸಮಾವೇಶ ನಡೆಯಲಿದೆ. ಇನ್ನೂ ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ ನೀಡಿ ಪೂರ್ವ ತಯಾರಿ ಕಾರ್ಯಗಳನ್ನು ಪರಿಶೀಲಿಸಿದ್ದಾರೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಎರಡನೇ ಹಂತದ ಹೋರಾಟ ಇದೇ 27ರಂದು ರಾಮನಗರದಲ್ಲಿ ಆರಂಭವಾಗಿ ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದ ಮೂಲಕ ಮುಕ್ತಾಯಗೊಳ್ಳಲಿದೆ.

Edited By : Nagaraj Tulugeri
PublicNext

PublicNext

27/02/2022 07:32 am

Cinque Terre

29.27 K

Cinque Terre

7

ಸಂಬಂಧಿತ ಸುದ್ದಿ