ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿದರು. ಈ ವೇಳೆ ಹೆಲಿಪ್ಯಾಡ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು..
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶನಿವಾರ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿ -ನಡೆ ಹಳ್ಳಿಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸುರಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ ಯೋಹನೆಗಳ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಗೋವಿಂದ ಕಾರಜೋಳ, ಆರ್. ಅಶೋಕ, ಪ್ರಭು ಚವ್ಹಾಣ, ರಾಯಚೂರ ಲೋಕಸಭಾ ಸದಸ್ಯ ಅಮರೇಶ ನಾಯಕ, ಶಾಸಕರುಗಳಾದ ರಾಜೂಗೌಡ, ಶರಣಬಸಪ್ಪ ದರ್ಶನಾಪೂರ, ಜಿಲ್ಲಾಧಿಕಾರಿ ರಾಗಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು.
PublicNext
19/03/2022 04:07 pm