ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಇಂದಿರಾ ಕ್ಯಾಂಟೀನ್ ಬಂದ್; ಬಡವರ ಹೊಟ್ಟೆಗೆ ಹೊಡೆಯಿತಾ ಸರ್ಕಾರ ?

ದಾವಣಗೆರೆ: ಬೆಣ್ಣೆನಗರಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಡವರ ಹೊಟ್ಟೆ ತುಂಬಿಸಲು ಆರಂಭಿಸಿದ ಮಹತ್ವಾಕಾಂಕ್ಷೆ ಯೋಜನೆ ಈಗ ಹಳ್ಳ ಹಿಡಿದಿದೆ‌. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ಇಂದಿರಾ ಕ್ಯಾಂಟೀ‌ನ್ ಮುಚ್ಚಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಾ.16ರಿಂದಲೇ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು, ಆಟೋರಿಕ್ಷಾ ಚಾಲಕರು ಸೇರಿದಂತೆ ಸಾವಿರಾರು ಮಂದಿ ಕಡಿಮೆ ಹಣದಲ್ಲಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಆದ್ರೆ, ಈಗ ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೂ ಹೊಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ ಮುಚ್ಚಿರುವುದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ. ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಹಿಂಭಾಗದ ನಿಟುವಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಿಂದ ಬೇರೆ ಕಡೆಗಳಿಗೂ ಆಹಾರ ಸರಬರಾಜು ಮಾಡಲಾಗುತ್ತಿತ್ತು.

ಇಲ್ಲಿನ ಇಂದಿರಾ ಕ್ಯಾಂಟೀನ್ ತೆರೆದಿಲ್ಲ. ಈ ಹಿನ್ನೆಲೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕ ಜಿ‌.ಎಸ್. ಗಡಿಗುಡಾಳ್ ಮಂಜುನಾಥ್ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟಾಗ ಅವ್ಯವಸ್ಥೆಯ ಆಗರ ಕಂಡು ಬಂದಿದೆ. ಆದಷ್ಟು ಬೇಗ ಇಂದಿರಾ ಕ್ಯಾಂಟೀನ್ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Edited By : Manjunath H D
PublicNext

PublicNext

24/03/2022 05:43 pm

Cinque Terre

141.5 K

Cinque Terre

13

ಸಂಬಂಧಿತ ಸುದ್ದಿ