ಬೆಂಗಳೂರು: ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದರು.
ಇಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ಸ್ವಯಂ ಉದ್ಯೋಗ ಮಾಡುವ ಎಸ್ಸಿ ಎಸ್ಟಿ ಸಮುದಾಯಕ್ಕೆ ಪ್ರತಿ ತಾಲ್ಲೂಕಿನಲ್ಲಿ ಬಾಬು ಜಗಜೀವರಾಂ ಸ್ವಯಂ ಉದ್ಯೋಗ ಯೋಜನೆಯನ್ನು ತರಲು ತೀರ್ಮಾನಿಸಲಾಗಿದೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು. 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ‘ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ 8 ರಿಂದ 12 ವರೆಗಿನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು. ಎಸ್‌ಸಿ, ಎಸ್‌ಟಿ ಸಮುದಾಯಗಳಿಗಾಗಿ ಸ್ಟಾರ್ಟ್ ಅಪ್ ಯೋಜನೆಯಡಿ 50 ಲಕ್ಷ ರೂ.ಗಳ ಸಹಾಯಧನ ನೀಡುವ ಯೋಜನೆಯನ್ನು ಆಯವ್ಯಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
PublicNext
05/04/2022 06:16 pm