ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ತೆರಿಗೆ ಪಾವತಿಸುವ ನಗರಗಳ ಪೈಕಿ ಬೆಂಗಳೂರು 2ನೇ ಸ್ಥಾನದಲ್ಲಿದೆ. ಆದರೆ ಅಭಿವೃದ್ದಿಯಲ್ಲಿ ಹಿಂದೆ ಇದೆ ಎಂದು ಉದ್ಯಮಿ, ಐಟಿ ದಿಗ್ಗಜ ಟಿ.ವಿ.ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದಾರೆ. 2021-22ರ ಆರ್ಥಿಕ ವರ್ಷದಲ್ಲಿ ಬೆಂಗಳೂರು ₹ 1.69 ಲಕ್ಷ ಕೋಟಿ ಆದಾಯ ತೆರಿಗೆ ಪಾವತಿಸಿದೆ. ದೆಹಲಿ ₹ 1.66 ಲಕ್ಷ ಕೋಟಿ ತೆರಿಗೆ ಪಾವತಿಸಿದೆ. ಹೆಚ್ಚು ತೆರಿಗೆ ಪಾವತಿಸಿದರೂ ದೆಹಲಿಯಿಂದ ಬೆಂಗಳೂರು ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಅವರು ವಿಷಾದಿಸಿದ್ದಾರೆ.
ಬೆಂಗಳೂರಿನ ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿವೆ. ಟ್ರಾಫಿಕ್ ಜಾಮ್ ಆಗುತ್ತಲೇ ಇರುತ್ತದೆ. ಜೀವನ ಗುಣಮಟ್ಟವು ಕುಸಿದಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಿ ಜನರಿಗೆ ಸಹಾಯ ಮಾಡಬೇಕಿದೆ ಎಂದು ಅವರು ಕೋರಿದ್ದಾರೆ. ಹಲವು ವಿಚಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಿರುವ ಮೋಹನ್ ದಾಸ್ ಪೈ ಅವರು ಬೆಂಗಳೂರಿನ ಮೂಲಸೌಕರ್ಯ ವಿಚಾರದಲ್ಲಿ ಮಾತ್ರ ಬಿಜೆಪಿ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.
PublicNext
09/04/2022 09:01 am