ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಗತಿ ಮೈದಾನ ಇಂಟಿಗ್ರೇಟೆಡ್ ಟ್ರಾನ್ಸಿಟ್ ಅಡಿಯಲ್ಲಿ ನಿರ್ಮಿಸಲಾದ ಐಟಿಪಿಒ ಸುರಂಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲಿ ಆರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ತಮ್ಮದೇ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಈ ವಿಡಿಯೋವನ್ನು ಪಶ್ಚಿಮ ಬಂಗಾಳದ ಬಿಜೆಪಿ ಸಹ-ಪ್ರಭಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, 'ಐಟಿಪಿಒ ಸುರಂಗ ಮಾರ್ಗದ ಉದ್ಘಾಟನೆಯ ವೇಳೆ ಅಲ್ಲಿದ್ದ ಕಸವನ್ನು ಪ್ರಧಾನಿ ಮೋದಿ ಅವರೇ ಸ್ವತಃ ತೆಗೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ' ಎಂದು ಬರೆದುಕೊಂಡಿದ್ದಾರೆ.
ಪ್ರಗತಿ ಮೈದಾನದ ಪುನರಾಭಿವೃದ್ಧಿಯ ಭಾಗವಾಗಿರುವ ಸುರಂಗ ಮಾರ್ಗ ಮತ್ತು 5 ಅಂಡರ್‌ಪಾಸ್‌ಗಳ ಉದ್ಘಾಟನಾ ಕಾರ್ಯಕ್ರಮ ನಂತರ ಈ ವಿಡಿಯೋ ವೈರಲ್ ಆಗುತ್ತಿದೆ. ಪ್ರಗತಿ ಮೈದಾನ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯನ್ನು 920 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಸಂಪೂರ್ಣ ಕೇಂದ್ರ ಸರ್ಕಾರವೇ ಅನುದಾನ ನೀಡಿದೆ.
PublicNext
19/06/2022 03:54 pm