ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಚಪ್ಪರದ ನಿಲ್ದಾಣ ಉದ್ಘಾಟನೆಗೆ ಎಂಎಲ್‌ಎ ಬದಲು ಎಮ್ಮೆ ಚೀಫ್ ಗೆಸ್ಟ್ !

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಬಿದ್ದುಹೋಗಿರುವ ಬಸ್ ನಿಲ್ದಾಣದ ಎದುರು ತೆಂಗಿನ ಗರಿಯ ಮೂಲಕ ಚಪ್ಪರ ಕಟ್ಟಿ, ಚಪ್ಪರದ ಬಸ್ ನಿಲ್ದಾಣವನ್ನ ಉದ್ಘಾಟನೆ ಮಾಡಲಾಯ್ತು.

ಕಿತ್ತು ಹೋದ ಬಸ್ ನಿಲ್ದಾಣದ ಉದ್ಘಾಟನೆಗೆ ಎಮ್ಎಲ್ಎ ಬದಲು ಎಮ್ಮೆಯನ್ನ ಚೀಫ್ ಗೆಸ್ಟ್ ಮಾಡಲಾಗಿತ್ತು. ದಶಕದ ಹಿಂದೆಯೇ ಬಾಲೇಹೊಸೂರು ಗ್ರಾಮದ ಬಸ್ ನಿಲ್ದಾಣ ಬಿದ್ದು ಹೋಗಿವೆ. ಈ ಬಗ್ಗೆ ಸ್ಥಳೀಯ ಶಾಸಕ ರಾಮಪ್ಪ ಲಮಾಣಿ, ಸಂಸದ ಶಿವಕುಮಾರ್ ಉದಾಸಿಯವರಿಗೆ ಮನವಿ ಸಲ್ಲಿಸಲಾಗಿತ್ತು. ಆದ್ರೆ ಸೂಕ್ತ ಭರವಸೆ ಸಿಕ್ಕಿರಲಿಲ್ವಂತೆ. ಹೀಗಾಗಿ ಗ್ರಾಮಸ್ಥರು ಸೇರ್ಕೊಂಡು ಚಪ್ಪರದ ಬಸ್ ನಿಲ್ದಾಣ ಮಾಡಿ, ಉದ್ಘಾಟನೆಯನ್ನೂ ಮಾಡಿದ್ದಾರೆ.

ಬಾಲೇಹೊಸೂರು ಗ್ರಾಮದಲ್ಲಿ ಸುಮಾರು 40 ವರ್ಷದ ಹಿಂದೆ ಬಸ್ ನಿಲ್ದಾಣ ನಿರ್ಮಾಣವಾಗಿತ್ತು. ಸುಮಾರು 10 ವರ್ಷದ ಹಿಂದೆಯೇ ಛಾವಣಿ ಕುಸಿದು ಬಸ್ ನಿಲ್ದಾಣದ ಕಟ್ಟಡ ಸಂಪೂರ್ಣವಾಗಿ ಹಾಳಾಗಿದೆ. ಕಟ್ಟಡದ ಆವರಣದಲ್ಲಿ ಕಸ ಚೆಲ್ಲುವ ಮೂಲಕ ಡಂಪಿಂಗ್ ಯಾರ್ಡ್ ಆಗಿ ಪರಿಣಮಿಸಿದೆ. ಗ್ರಾಮದ ಮಹಿಳೆಯರು ಬಸ್ ನಿಲ್ದಾಣದ ಪಕ್ಕದ ಕಟ್ಟೆ ಮೇಲೆ ಕೂತು ಬಸ್ ಗೆ ಕಾಯಬೇಕಾದ ಪರಿಸ್ಥಿತಿ ಇದೆ ಅಂತ ರೈತ ಮುಖಂಡ ಲೋಕೇಶ್ ಜಾಲವಾಡಗಿ ಅವರು ಹೇಳ್ತಿದಾರೆ.

ಗ್ರಾಮದಲ್ಲಿ ಸುಮಾರು 5 ಸಾವಿರ ಜನ ಸಂಖ್ಯೆ ಇದೆ. ವಿದ್ಯಾಭ್ಯಾಸದ ನಿಮಿತ್ತ ನಿತ್ಯ 100 ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಹಾಗೂ ಗುತ್ತಲ ಗ್ರಾಮಕ್ಕೆ ಹೋಗ್ತಾರೆ. ಸ್ಪಂದನೆ ಸಿಗದಿದ್ದರೆ ಹೋರಾಟ ಮಾಡೋದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Edited By : Manjunath H D
PublicNext

PublicNext

19/07/2022 09:54 pm

Cinque Terre

65.72 K

Cinque Terre

9

ಸಂಬಂಧಿತ ಸುದ್ದಿ