ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕಿತ್ತೂರ ಕೋಟೆ ಸ್ಥಳಾಂತರ ಬೇಡ; ಜಿಲ್ಲಾಡಳಿತದ ವಿರುದ್ಧ ಕೆಂಡವಾದ ಕಿತ್ತೂರ ಜನತೆ

ವರದಿ - ಸಂತೋಷ ಬಡಕಂಬಿ.

ಬೆಳಗಾವಿ: ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ರಾಣಿ ಚನ್ನಮ್ಮಾಜಿಯ ಅರಮನೆಯ ಪ್ರತಿರೂಪ ಕಟ್ಟಡ ನಿರ್ಮಾಣ ವಿರೋಧಿಸಿ ಕರೆ ನೀಡಲಾಗಿದ್ದ ಕಿತ್ತೂರು ಬಂದ್ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಚ್ಚನಕೇರಿ ಗ್ರಾಮದಲ್ಲಿರುವ 57 ಎಕರೆ ಜಾಗವನ್ನು ಕಿತ್ತೂರು ಕೋಟೆಯ ಅರಮನೆಯ ಪ್ರತಿರೂಪ ಕಟ್ಟಡ ನಿರ್ಮಾಣಕ್ಕೆ ಮೀಸಲಿಡಲು ಜಿಲ್ಲಾಡಳಿತದ ವತಿಯಿಂದ ನಿರ್ಧರಿಸಲಾಗಿದೆ. ಇನ್ನು ಅರಮನೆ ನಿರ್ಮಾಣಕ್ಕೆ ಸರ್ಕಾರಿ ಜಾಗ ಕಿತ್ತೂರು ಪ್ರಾಧಿಕಾರಕ್ಕೆ ನೀಡಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಡಿಸಿ ಪತ್ರ ಕೂಡ ಬರೆದಿದ್ದಾರೆ. ಈ ಸಂಬಂಧ ಆಕ್ಷೇಪಗಳಿದ್ರೆ ಸಮರ್ಪಕವಾದ ಕಾರಣ ನೀಡಲು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ.

ಇದೀಗ ಬಚ್ಚನಕೇರಿಯಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಿತ್ತೂರು ಅರಮನೆಯಲ್ಲಿಯೇ ಕೋಟೆಯ ಪ್ರತಿರೂಪ ನಿರ್ಮಾಣ ಆಗಬೇಕು ಎಂದು ಆಗ್ರಹಿಸಿ ಇಂದು ಕಿತ್ತೂರು ಬಂದ್ಗೆ ಕರೆ ನೀಡಲಾಗಿತ್ತು. ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕಿತ್ತೂರಿನಿಂದ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು.

ಕಿತ್ತೂರಿನಿಂದ ನೂರಾರು ವಾಹನಗಳ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ತಕ್ಷಣ ಈ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಏಕಪಕ್ಷೀಯ ತೀರ್ಮಾನದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು. ಪ್ರಸ್ತುತ ಹಳೆಯ ಕೋಟೆ ಎದುರಿರುವ ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡು ಸರ್ಕಾರ ರೈತರಿಗೆ ಸೂಕ್ತ ಪರಿಹಾರ ನೀಡಿ ಆ ಜಾಗದಲ್ಲೇ ಕೋಟೆ ನಿರ್ಮಾಣದ ಕಾರ್ಯ ಮಾಡಬೇಕೆಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

02/08/2022 07:11 pm

Cinque Terre

30.77 K

Cinque Terre

0

ಸಂಬಂಧಿತ ಸುದ್ದಿ