ತುಮಕೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸರ್ವೋದಯ ಮಂಡಲದಿಂದ (ಕರ್ನಾಟಕದ ಜಲಿಯನ್ ವಾಲಾ ಬಾಗ್) ವಿದುರಾಶ್ವತ್ಥಕ್ಕೆ ಹೊರಟಿರುವ ಹಿರಿಯ ನಾಗರೀಕರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಾಂಧಿ ಸ್ಮಾರಕದಲ್ಲಿ ನಮನ ಸಲ್ಲಿಸಲು ಭಾನುವಾರ ಆಗಮಿಸಿದ್ದ ಸಂದರ್ಭದಲ್ಲಿ ಅವರಿಗೆ ಶುಭ ಕೋರಿದರು.
ತುಮಕೂರಿನ ಹೃದಯಭಾಗದಲ್ಲಿರುವ ಮಹಾತ್ಮಗಾಂಧಿ ಸ್ಮಾರಕ ಭವನ ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯಿಲ್ಲ, ಶೌಚಾಲಯವಿಲ್ಲ, ವಿದ್ಯುತ್ ದೀಪವಿಲ್ಲ, ಕುಳಿತುಕೊಳ್ಳಲು ಆಸನಗಳಿಲ್ಲ, ಸರಿಯಾಗಿ ನಿರ್ವಹಣೆ ಮಾಡುವವರಿಲ್ಲ. ಆದ್ದರಿಂದ ಜಿಲ್ಲಾಡಳಿತ ಮತ್ತು ಸರ್ಕಾರ ಇತ್ತ ಗಮನ ಹರಿಸಿ ಮಹಾತ್ಮ ಗಾಂಧಿ ಸ್ಮಾರಕ ಭವನಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಜೊತೆಗೆ ಇಲ್ಲಿ ನಿರ್ವಹಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಒತ್ತಾಯಿಸಿದ್ದಾರೆ.
ಮಹಾತ್ಮಗಾಂಧಿ ಸ್ಮಾರಕ ಭವನ ತುಮಕೂರು ಜಿಲ್ಲೆಯಲ್ಲಿ ಒಂದು ಮಾದರಿ ಕೇಂದ್ರ ವಾಗಬೇಕು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ಧಗಂಗಯ್ಯ ಹೊಲತಾಳ್, ಅಕ್ಕಮ್ಮ, ನಾಗರಾಜು, ನಟರಾಜಶೆಟ್ಟಿ, ಸೋಮಶೇಖರ್, ಉಗಮಶ್ರೀನಿವಾಸ್, ನರಸಿಂಹಮೂರ್ತಿ, ಚಂದ್ರಶೇಖರಗೌಡ, ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ:ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್
PublicNext
15/08/2022 09:31 am