ಕೊರಟಗೆರೆ : 2022-23ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಾಲೂಕು ಆಡಳಿತ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಸತಿ ಯೋಜನೆ ಮನೆ ಮಂಜೂರಾತಿ ಪತ್ರ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಸಿ.ಎಸ್.ಐ ಸಾಲದ ಚೆಕ್ ವಿತರಣೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಶಾಸಕ ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಬಂದಿದ್ದ ನೂರಾರು ಫಲಾನುಭವಿಗಳು, ಸಾವಿರಾರು ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಮಧ್ಯಾಹ್ನದ ಹೊತ್ತು ಉಪಹಾರ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಊಟಕ್ಕಾಗಿ ನೂಕುನುಗ್ಗಲು ಏರ್ಪಟ್ಟು, ಊಟದ ವ್ಯವಸ್ಥೆ ಮಾಡಿದ ಸಂಘಟಕರಿಗೆ ಹಿಡಿಶಾಪ ಹಾಕಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.
ನಮ್ಮನ್ನು ಕಾರ್ಯಕ್ರಮಕ್ಕೆ ಕರೆ ತಂದಿದ್ದಾರೆ ಆದರೆ ಸೂಕ್ತ ರೀತಿಯಲ್ಲಿ ಆಹಾರ ವ್ಯವಸ್ಥೆಯನ್ನು ಮಾಡಿಲ್ಲ, ಎಂಬ ಆರೋಪಗಳನ್ನು ಫಲಾನುಭವಿಗಳು ಮತ್ತು ಸ್ತ್ರೀ ಶಕ್ತಿ ಸಂಘದ ಸದಸ್ಯರು ಮಾಡಿದ್ದು ಎಲ್ಲೇಡೆ ಊಟದ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ವರದಿ ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್, ತುಮಕೂರು
PublicNext
03/09/2022 08:55 pm