ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ : ಪ್ರಮುಖ ರಾಜ್ಯಗಳಲ್ಲಿ ಬೈಡೆನ್ ಗೆಲುವು ಬಹುಮತ ಸಾಧ್ಯತೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟು ಮತ ಎಣಿಕೆ ಕೊನೆಯ ಹಂತ ತಲುಪಿದೆ.

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡೆನ್ ಅವರು 264 ಎಲೆಕ್ಟೋರಲ್ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಯಾಗಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 214 ಮತಗಳ ಮುನ್ನೆಡೆ ಹೊಂದಿದ್ದಾರೆ.

ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಲಿರುವ ಮಿಷಿಗನ್ ಮತ್ತು ವಿಸ್ ಕಾನ್ಸಿಸ್ ರಾಜ್ಯಗಳಲ್ಲಿ ಬೈಡೆನ್ ಗೆಲುವು ಸಾಧಿಸಿದ್ದಾರೆ.

ಈ ಎರಡೂ ರಾಜ್ಯಗಳಲ್ಲಿನ ಸೋಲು ಡೊನಾಲ್ಡ್ ಟ್ರಂಪ್ ಅವರಿಗೆ ಭಾರೀ ಹಿನ್ನೆಡೆ ಉಂಟು ಮಾಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡೊನಾಲ್ಡ್ ಟ್ರಂಪ್, ಇದು 'ಸಾಮೂಹಿಕ ವಂಚನೆ' ಎಂದು ಆರೋಪಿಸಿದ್ದಾರೆ.

ಇನ್ನೂ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೇರಲು ಬೈಡೆನ್ ಗೆ 270 ಎಲೆಕ್ಟೋರಲ್ ಮತಗಳ ಮ್ಯಾಜಿಕ್ ಸಂಖ್ಯೆಯನ್ನು ಹೊಂದಬೇಕಿದೆ.

ಮತ ಎಣಿಕೆ ಬಗ್ಗೆ ಟ್ರಂಪ್ ಅಸಮಾಧಾನ

‘ಚುನಾವಣಾ ಅವಧಿ ಮೀರಿದ ನಂತರ ಬಂದ ಇ-ಮೇಲ್ ಮತಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಮತಗಳ ಎಣಿಕೆ ಆರಂಭವಾಗಿದೆ. ಇದನ್ನು ತಡೆಯಲು ನಾವು ಸುಪ್ರೀಂ ಕೋರ್ಟ್ ಗೆ ಹೋಗುತ್ತೇವೆ’ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ್ದ ಬೈಡನ್, 'ಟ್ರಂಪ್ ಅವರ ಹೇಳಿಕೆ ಅತಿರೇಕ ಮತ್ತು ಅಸಾಧಾರಣ.

ಅವರು ಮತ ಎಣಿಕೆ ನಿಲ್ಲಿಸಲು ಸುಪ್ರೀಂ ಕೋರ್ಟ್ ಗೆ ಹೋಗುವಾದರೆ, ಅದನ್ನು ಎದುರಿಸಲು ನಮ್ಮ ಕಾನೂನು ತಂಡ ಸಿದ್ಧವಿದೆ.

ಆದರೆ ಯಾವ ಕಾರಣಕ್ಕೂ ಮತ ಎಣಿಕೆಯನ್ನು ನಿಲ್ಲಿಸಲು ಬಿಡುವುದಿಲ್ಲ. ಚಲಾವಣೆಯಾಗಿರುವ ಪ್ರತಿಯೊಂದು ಮತವೂ ಎಣಿಕೆಯಾಗಬೇಕು' ಎಂದಿದ್ದಾರೆ.

Edited By : Nirmala Aralikatti
PublicNext

PublicNext

05/11/2020 09:23 am

Cinque Terre

84.18 K

Cinque Terre

0

ಸಂಬಂಧಿತ ಸುದ್ದಿ