ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ರಂಪ್ ಬೆಂಬಲಿಗರಿಂದ ದಾಂಧಲೆ : ಅಮೆರಿಕದ ದೇಶೀಯ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸಿದ ಮೊದಲ ಪ್ರಧಾನಿ ಮೋದಿ

ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷ ಸ್ಥಾನಪಲ್ಲಟಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೆ ಮಾಜಿ ಅಧ್ಯಕ್ಷರ ಬೆಂಬಲಿಗರಿಂದ ಗಲಾಟೆ ಗದ್ದಲ ನಡೆಯುತ್ತಿದೆ.

ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಕ್ಯಾಪಿಟಲ್ ಕಟ್ಟಡದ ಮೇಲೆ ಡೊನಾಲ್ಡ್ ಟ್ರಂಪ್ ಬೆಂಬಲಿಗರ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ದಿಗ್ಭ್ರಾಂತರಾಗಿದ್ದಾರೆ.

ಅಧ್ಯಕ್ಷೀಯ ಪಟ್ಟಕ್ಕಾಗಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿರುವಾಗಲೇ ಮತ ಎಣಿಕೆ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ ನೂರಾರು ಟ್ರಂಪ್ ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಗಿಳಿದು ಹಿಂಸಾಚಾರ ನಡೆಯುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಗಲಭೆ ಮತ್ತು ಹಿಂಸಾಚಾರದ ಸುದ್ದಿಗಳನ್ನು ನೋಡಿ ಆಘಾತವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿಗಳನ್ನು ನೋಡಿ ಆಘಾತವಾಗಿದೆ.

ಅಧಿಕಾರದ ಕ್ರಮಬದ್ಧ ಮತ್ತು ಶಾಂತಿಯುತ ವರ್ಗಾವಣೆ ಮುಂದುವರಿಯಬೇಕು.

ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇನ್ನು ಗಲಭೆಗೆ ಸಂಬಂಧಿಸಿದಂತೆ ಭಾಷಣ ಮಾಡಿದ್ದ ಟ್ರಂಪ್ ತಮ್ಮ ಬೆಂಬಲಿಗರಲ್ಲಿ ಹಿಂಸಾಚಾರವನ್ನು ನಿಲ್ಲಿಸಿ ಮನೆಗೆ ಹೋಗುವಂತೆ ಮನವಿ ಮಾಡಿದ್ದಾರೆ.

ಆದರೂ ತಮ್ಮ ಭಾಷಣದಲ್ಲಿ ಚುನಾವಣಾ ಅಕ್ರಮದ ಕುರಿತು ಮಾತನಾಡುವ ಮೂಲಕ ಟ್ರಂಪ್ ಮತ್ತೆ ಬೆಂಬಲಿಗರಿಗೆ ಪ್ರಚೋದನೆ ನೀಡಿದ್ದಾರೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

07/01/2021 09:41 am

Cinque Terre

60.88 K

Cinque Terre

0

ಸಂಬಂಧಿತ ಸುದ್ದಿ