ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾತುಕತೆ ಮೂಲಕ ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಸಿದ್ಧ: ಇಮ್ರಾನ್‌ ಖಾನ್‌

ಇಸ್ಲಾಮಾಬಾದ್‌: ಭಾರತದೊಂದಿಗಿನ ಕಾಶ್ಮೀರ ಸೇರಿದಂತೆ ಎಲ್ಲ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಿದ್ಧ ಎಂದು ಹೇಳುವ ಮೂಲಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮೂಡಿಸಿದ್ದಾರೆ.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ನೇತೃತ್ವದಲ್ಲಿ ನಡೆದ ಶ್ರೀಲಂಕಾ-ಪಾಕಿಸ್ತಾನ ಟ್ರೇಡ್ ಆ್ಯಂಡ್ ಇನ್ವೆಸ್ಟ್‍ಮೆಂಟ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ''ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಜಾರಿಗೊಳಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಉಭಯ ದೇಶಗಳ ನಡುವೆ ಮತ್ತಷ್ಟು ಸೌಹಾರ್ದಯುತ ಕ್ರಮಗಳನ್ನು ಕೈಗೊಳ್ಳಲು ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಭಾರತದ ಮೇಲಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಂತೆ ಕಾಶ್ಮೀರ ಜನತೆಯ ಬೇಡಿಕೆಗಳು ಮತ್ತು ಹಕ್ಕುಗಳನ್ನು ಈಡೇರಿಸಲು ಭಾರತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು'' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

27/02/2021 08:09 pm

Cinque Terre

123.02 K

Cinque Terre

24

ಸಂಬಂಧಿತ ಸುದ್ದಿ