ಇಸ್ಲಾಮಾಬಾದ್: ಸದಾ ಭಾರತದ ಮೇಲೆ ದಾಳಿ ಮಾಡುತ್ತಲೇ ಕಾಲ ಕಳೆಯುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇತ್ತೀಚೆಗೆ ತಮ್ಮ ಸಚಿವಾಲಯದ ಕರೆಂಟ್ ಬಿಲ್ ಕಟ್ಟದೇ ಸುದ್ದಿಯಾಗಿದ್ದರು. ಈ ಬೆನ್ನಲ್ಲೇ ತಾವು ನೆಲೆಸಬೇಕಾದ ಪಾಕ್ ಪ್ರಧಾನಿ ಅಧಿಕೃತ ನಿವಾಸವನ್ನೇ ಬಾಡಿಗೆಗೆ ನೀಡುವ ನಿರ್ಧಾರಕ್ಕೆ ಬರುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಈ ಕುರಿತಾಗಿ ಖುದ್ದು ಇಮ್ರಾನ್ ಖಾನ್ ಅವರೇ ಹೀಗೊಂದು ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪಾಕಿಸ್ತಾನ ಸುದ್ದಿ ಮೂಲಗಳಿಂದ ತಿಳಿದುಬಂದಿದೆ. 2019ರ ಆಗಸ್ಟ್‌ನಲ್ಲಿ ಇಮ್ರಾನ್ ಖಾನ್ ಪ್ರಧಾನಿ ಸರ್ಕಾರದ ಅಧಿಕೃತ ನಿವಾಸದಿಂದ ಸ್ವಂತ ಮನೆಗೆ ಶಿಫ್ಟ್ ಆಗಿದ್ದರು. ಬಳಿಕ ಈ ಪ್ರಧಾನಿ ನಿವಾಸವನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸುತ್ತೇವೆ ಎಂದು ಪಾಕಿಸ್ತಾನ ಸರ್ಕಾರ ಹೇಳಿತ್ತು. ಆದರೀಗ ಪ್ರಧಾನಿ ನಿವಾಸ ಕಟ್ಟಡವನ್ನು ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದೆ.
ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಫ್ಯಾಷನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜಿಸಲು ಈ ಪ್ರಧಾನಿ ನಿವಾಸ ಬಾಡಿಗೆಗೆ ಸಿಗಲಿದೆ. ಸರ್ಕಾರದ ಯಾವುದೇ ನಿಯಮಗಳನ್ನು ಉಲ್ಲಂಘಿಸದೇ ಈ ಕಟ್ಟಡ ಬಳಿಸಿಕೊಳ್ಳಬಹುದು ಎಂದು ಪಾಕ್ ಫೆಡೆರಲ್ ಕ್ಯಾಬಿನೆಟ್ ಆದೇಶಿಸಿದೆ.
PublicNext
03/08/2021 09:08 pm