ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ ಭದ್ರತೆ ಕುರಿತು ಮೋದಿ ನೇತೃತ್ವದಲ್ಲಿ ಸಭೆ; ಹಲವು ದೇಶಗಳ ಅಧ್ಯಕ್ಷರು ಭಾಗಿ ಸಾಧ್ಯತೆ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಾಗರ ಭದ್ರತೆ ಕುರಿತು ಉನ್ನತ ಮಟ್ಟದ ವರ್ಚುವಲ್ ಮುಕ್ತ ಸಭೆ ಹಾಗೂ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಸೇರಿದಂತೆ ಹಲವು ರಾಷ್ಟ್ರ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.

ಸೋಮವಾರ ಸಂಜೆ 5.30ವರೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಡಲ ಭದ್ರತೆಯನ್ನು ಹೆಚ್ಚಿಸುವುದು - ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ' ಕುರಿತು ಮುಕ್ತ ಚರ್ಚೆ ನಡೆಯಲಿದೆ. ಚರ್ಚೆಯಲ್ಲಿ ಕಡಲ ಅಪರಾಧ ಮತ್ತು ಅಭದ್ರತೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಮತ್ತು ಸಮುದ್ರ ವಲಯದಲ್ಲಿ ಸಮನ್ವಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಪ್ರಸ್ತಾಪಿಸಲಾಗುವುದು.

Edited By : Nagaraj Tulugeri
PublicNext

PublicNext

09/08/2021 07:25 am

Cinque Terre

33.03 K

Cinque Terre

1

ಸಂಬಂಧಿತ ಸುದ್ದಿ