ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಘನ್ ಬಿಕ್ಕಟ್ಟಿನ ನಡುವೆ ಜೋ ಬೈಡನ್ ಹವಾ ಕಡಿಮೆ ಆಯ್ತಾ?

ವಾಷಿಂಗ್ಟನ್: ಅಪ್ಘಾನಿಸ್ತಾನ ಬಿಕ್ಕಟ್ಟಿನ ಹಲವು ಬೆಳವಣಿಗೆಗಳ ನಡುವೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ತಾಲಿಬಾನಿಗಳು ಅಪ್ಘಾನಿಸ್ತಾನವನ್ನು ಸಂಪೂರ್ಣ ವಶಪಡಿಸಿಕೊಂಡ ನಂತರ ಅಮೆರಿಕ ತನ್ನ ಸೈನ್ಯವನ್ನು ಅಪ್ಘಾನಿಸ್ತಾನದಿಂದ ವಾಪಸ್ ಕರೆಸಿಕೊಂಡಿದೆ. ಚೀನಾ ಕೂಡ ಅಮೆರಿಕಾ ಕ್ರಮವನ್ನು ಟೀಕಿಸಿದೆ. ಅಮೆರಿಕಾದ ನಿರ್ಧಾರದಿಂದ ಅಫ್ಘಾನಿಸ್ತಾನದಲ್ಲಿ ಘೋರ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಆರೋಪಿಸಿದೆ.

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಬೈಡನ್‌ ಅವರನ್ನು ಬೆಂಬಲಿಸುವವರ ಸಂಖ್ಯೆ ಶೇಕಡಾ 7 ರಷ್ಟು ಕುಸಿದಿದೆ ಎಂದು ವರದಿಯಾಗಿದೆ. ಇದು ಮಾಧ್ಯಮ ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಜನವರಿಯಲ್ಲಿ ಬೈಡೆನ್ ಅಮೆರಿಕಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಅವರ ಅಪ್ರೋವಲ್‌ ರೇಟಿಂಗ್ ಕಡಿಮೆಯಾಗಿರಲಿಲ್ಲ ಎಂದು ಸಮೀಕ್ಷೆ ಹೇಳಿದೆ.

Edited By : Nagaraj Tulugeri
PublicNext

PublicNext

20/08/2021 07:46 am

Cinque Terre

52.88 K

Cinque Terre

3

ಸಂಬಂಧಿತ ಸುದ್ದಿ