ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಿ ಮಾತು: ಅಪ್ಘನ್ ಪರಿಸ್ಥಿತಿ ಬಗ್ಗೆ ಚರ್ಚೆ

ನವದೆಹಲಿ: ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೂರವಾಣಿ ಮೂಲಕ ಸಮಾಲೋಚಿಸಿದ್ದಾರೆ. ಅಪ್ಘನ್ ಬಿಕ್ಕಟ್ಟು ಹಾಗೂ ಯುರೋಪಿಯನ್ ಹಾಗೂ ಭಾರತದ ವಿದೇಶಾಂಗ ಸಂಬಂಧ ಬಲವರ್ಧನೆ ಬಗ್ಗೆ ಮಾತಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರ ಜೊತೆಗೆ ಅಪ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತಂತೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಉಭಯ ದೇಶಗಳ ಮುಖಂಡರು ಚರ್ಚಿಸಿದ್ದು, ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಪೈಶಾಚಿಕ ದಾಳಿಯನ್ನು ಖಂಡಿಸಿದ್ದಾರೆ.

Edited By : Nagaraj Tulugeri
PublicNext

PublicNext

01/09/2021 11:10 am

Cinque Terre

38.55 K

Cinque Terre

6

ಸಂಬಂಧಿತ ಸುದ್ದಿ