ಕಾಬೂಲ್ : ಅಪ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ ತಾಲಿಬಾನಿಗಳು ಕಾಬೂಲ್ ಏರ್‌ಪೋರ್ಟ್ ಹೆಸರು ಬದಲಾಯಿಸಿದ್ದಾರೆ. 'ಹಮೀದ್ ಕರ್ಜಾಯ್' ಎಂಬ ಹೆಸರನ್ನು ತೆಗೆದು ಹಾಕಿದ ತಾಲಿಬಾನ್ ಸರ್ಕಾರ 'ಕಾಬೂಲ್ ಇಂಟರ್ನ್ಯಾಷನಲ್ ಏರ್‌ಪೋರ್ಟ್' ಎಂದು ಹೆಸರು ಬದಲಾಯಿಸಿದೆ.
ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚಿಸಲು ಹವಣಿಸುತ್ತಿರುವ ತಾಲಿಬಾನ್ ಸೆ.11ರಂದು ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಈ ಹಿಂದೆ ಘೋಷಿಸಿತ್ತು. ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದ ದಿನದಂದು ಅಫ್ಘಾನಿಸ್ತಾನದಲ್ಲಿ ತನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ತರುವುದು ತಾಲಿಬಾನ್ ಉದ್ದೇಶವಾಗಿತ್ತು. ಆದರೆ ಅಧಿಕಾರ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗಿದೆ ಎನ್ನಲಾಗಿದೆ.
PublicNext
11/09/2021 09:09 am