ನ್ಯೂಯಾರ್ಕ್: ಭಯೋತ್ಪಾದನೆಯನ್ನ ರಾಜಕೀಯ ಸಾಧನವಾಗಿ ಬಳಕೆ ಮಾಡಿಕೊಳ್ಳುತ್ತಿರುವ ದೇಶಗಳು ಮುಂಬರುವ ದಿನಗಳಲ್ಲಿ ಅದರಿಂದಲೇ ತೊಂದರೆಗೊಳಗಾಗುತ್ತವೆ ಎಂದು ಎಂದು ಪ್ರಧಾನಿ ನರರೇಂದ್ರ ಮೋದಿ, ಪಾಕಿಸ್ತಾನ ಹಾಗೂ ಚೀನಾಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭಯೋತ್ಪಾದನೆ ರಾಜಕೀಯ ಅಸ್ತ್ರದಂತೆ ಬಳಕೆಯಾಗುತ್ತಿದ್ದು, ಆದರು ಆ ರೀತಿ ಆಗಬಾರದು ಎಂದು ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಅಫ್ಘಾನಿಸ್ತಾನದಲ್ಲಿ ಸದ್ಯದ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಅಲ್ಲಿನ ಮಹಿಳೆಯರು, ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತರಿಗೆ ರಕ್ಷಣೆ ಬೇಕು. ಅಲ್ಲಿನ ಪರಿಸ್ಥಿತಿ ಬೇರೆ ಉದ್ದೇಶಗಳಿಗೆ ಬಳಕೆ ಆಗಬಾರದು ಎಂದರು.
PublicNext
26/09/2021 07:39 am