ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹೆಚ್ಚಾಗುತ್ತಿರುವ ಹಣದುಬ್ಬರನ್ನು ವಿರೋಧಿಸಿ ಪಾಕಿಸ್ತಾನ್ ಮುಸ್ಮಿಂ ಲೀಗ್-ಎನ್(ಪಿಎಂಎಲ್-ಎನ್) ಸದಸ್ಯ, ಪಾಕಿಸ್ತಾನದ ಸಚಿವ ತಾರಿಕ್ ಮಾಸಿಹ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಹೌದು. ಸಚಿವ ತಾರಿಕ್ ಮಾಸಿಹ್ ಬುಧವಾರ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕುತ್ತಿಗೆಗೆ ಆಲೂಗಡ್ಡೆ, ಟೊಮ್ಯಾಟೋ ಮತ್ತು ಇತರ ತರಕಾರಿಗಳಿಂದ ತಯಾರಿಸಿದ ಹಾರವನ್ನು ಧರಿಸಿ ಪಂಜಾಬ್ ವಿಧಾನಸಭೆಗೆ ಸೈಕಲ್‌ನಲ್ಲಿ ತೆರಳಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಏರುತ್ತಿರುವ ಹಣದುಬ್ಬರದ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತೇನೆ. ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸೈಕಲ್‌ನಲ್ಲಿ ಸವಾರಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
PublicNext
29/10/2021 03:55 pm