ಹಾಸನ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಿ ವಾಪಸ್ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ತಮ್ಮ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡಿ ತಮ್ಮ ಆರಾಧ್ಯ ದೈವ ಶಿವನಿಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಕಳವಳ ಸೂಚಿಸಿದ್ದಾರೆ. ಅಲ್ಲಿನ ಭಾರತೀಯರನ್ನು ಕರೆತರುವ ಬಗ್ಗೆ ಪ್ರಧಾನಿಯವರಿಗೂ ಪತ್ರ ಬರೆದಿದ್ದೇನೆ. ನಿನ್ನೆ ಟ್ವೀಟ್ ಕೂಡ ಮಾಡಿದ್ದೇನೆ ಎಂದಿದ್ದಾರೆ. ನಮ್ಮ ಪ್ರಧಾನಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಒಳ್ಳೆಯ ಸ್ನೇಹಿತರು. ಹಾಗಾಗಿ ಸಾಧ್ಯವಾದಷ್ಟು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡುತ್ತಿದ್ದಾರೆ. ಸರ್ಕಾರ ಸುಮ್ಮನೇ ಕೂತಿಲ್ಲ. ಅಲ್ಲಿನ ಸರ್ಕಾರಗಳ ಜೊತೆ ಮಾತನಾಡಿದೆ. ಪ್ರಧಾನಿ ನರೇಂದ್ರ ಮೋದಿ ಎರಡೂ ದೇಶಗಳ ನಡುವೆ ಮಾತನಾಡಲು ಯತ್ನಿಸಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.
PublicNext
03/03/2022 11:58 am