ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಮೃತ ದೇಹ ಭಾರತಕ್ಕೆ ತನ್ನಿ: ಸಂಪುಟ ಸಭೆಯಲ್ಲಿ ಮೋದಿ ನಿರ್ದೇಶನ

ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಬಲಿಯಾದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರ ಮೃತದೇಹವನ್ನು ಭಾರತಕ್ಕೆ ಅತಿ ಶೀಘ್ರ ತರಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ದೇಶನ ನೀಡಿದ್ದಾರೆ.

ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್‌ನ ಖಾರ್ಕಿವ್‌ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವ್ರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು. ಮೃತ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ್ ಹಾವೇರಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಶೇಖರ್ ಪ್ಪನವರ ಕುಟುಂಬಕ್ಕೆ ₹25 ಲಕ್ಷ ದ ಚೆಕ್ ಹಸ್ತಾಂತರಿಸಿದ್ದಾರೆ. ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ 21 ವರ್ಷದ ಭಾರತೀಯ, ಉಕ್ರೇನ್ʼನ ಖಾರ್ಕಿವ್ʼನಲ್ಲಿ ರಷ್ಯಾದ ಶೆಲ್ ದಾಳಿಯಲ್ಲಿ ಮೃತಪಟ್ಟಾಗ ಆಹಾರ ಖರೀದಿಸಲು ಸರದಿಯಲ್ಲಿ ನಿಂತಿದ್ದ ಎಂದು ವರದಿಯಾಗಿದೆ.

Edited By : Nagaraj Tulugeri
PublicNext

PublicNext

13/03/2022 06:49 pm

Cinque Terre

74.2 K

Cinque Terre

6