ಇಸ್ಲಾಮಾಬಾದ್: ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿರುವ ಪ್ರತಿಪಕ್ಷಗಳ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಿಡಿಮಿಡಿಗೊಂಡಿದ್ದಾರೆ. ಏನು ಬೇಕಾದ್ರೂ ಆಗಲಿ. ನಾನು ಮುಂದೆ ನಿಂತು ಹೋರಾಟ ಮಾಡುವೆ. ಆದರೆ ಯಾವ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಎಂದಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್‌ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ. ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಏಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ತಿಳಿಸಿದ್ದಾರೆ. ಸಂಸತ್ತಿನ ಸಂಪ್ರದಾಯದ ಪ್ರಕಾರ ಮೊದಲ ಅಧಿವೇಶನವು ಅವರಿಗೆ ಗೌರವ ಸಲ್ಲಿಸಲು ಸೀಮಿತವಾಗಿದೆ.
PublicNext
25/03/2022 06:32 pm