ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪರಿಸ್ಥಿತಿ ಸರ್ಕಾರ ಕೈಮೀರಿ ವ್ಯಾಪಿಸುತ್ತಿದೆ. ಕೆಟ್ಟ ಆರ್ಥಿಕ ಸಂಕಷ್ಟದ ವಿರುದ್ಧ ಕೆರಳಿರುವ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ಸೆಂಟ್ರಲ್ ಬ್ಯಾಂಕ್ ಗವರ್ನರ್ ಅಜಿತ್ ನಿವಾರ್ಡ್ ಕ್ಯಾಬ್ರಾಲ್ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಶ್ರೀಲಂಕಾ ಸರ್ಕಾರದ ಸಚಿವ ಸಂಪುಟದ ಎಲ್ಲ 26 ಸದಸ್ಯರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಇದೀಗ ಕೇಂದ್ರ ಬ್ಯಾಂಕ್ ಗವರ್ನರ್ ಕೂಡ ರಾಜೀನಾಮೆ ನೀಡಿದ್ದಾರೆ.
PublicNext
04/04/2022 10:19 pm