ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.
ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ 33 ವರ್ಷದ ಬಿಲಾವಲ್ ಭುಟ್ಟೋ ಜರ್ದಾರಿ ಅವರಿಗೆ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಶೆಹಬಾಜ್ ಷರೀಫ್, ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ, ಪಿಪಿಪಿ ಪಕ್ಷದ ಮುಖಂಡರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
28/04/2022 07:39 pm