ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ವಿಶ್ವಾಸಮತದಲ್ಲಿ ಗೆಲುವು ಸಾಧಿಸಿದ್ದು, ಅಧಿಕಾರವನ್ನು ಭದ್ರಪಡಿಸಿಕೊಂಡಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯ, ಅನೇಕ ಹಗರಣಗಳಿಂದಾಗಿ ಪಕ್ಷದ ಘನತೆಗೆ ಸಾರ್ವಜನಿಕವಾಗಿ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಜಾನ್ಸನ್ ಅವರು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಾಗಿತ್ತು. ಅದರಲ್ಲೂ 'ಪಾರ್ಟಿಗೇಟ್' ವಿವಾದವು ಬೋರಿಸ್ ಜಾನ್ಸನ್ ಅವರ ಪ್ರಧಾನಿ ಸ್ಥಾನಕ್ಕೆ ಕುತ್ತಾಗಿ ಪರಿಣಿಮಿಸಿತ್ತು. ಹಾಗಾಗಿ ಪಕ್ಷದ ಕೆಲ ಸದಸ್ಯರೇ ಜಾನ್ಸನ್ ಅವರ ರಾಜೀನಾಮೆಗೆ ಆಗ್ರಹಿಸಿದ್ದರು.
ಸಂಸತ್‌ನಲ್ಲಿ ತಮ್ಮ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ನಿರ್ಣಯದಲ್ಲಿ ಜಾನ್ಸನ್ 211 ಮತಗಳನ್ನು ಗಳಿಸಿದರು. ಆದರೆ ಅವರದ್ದೇ ಪಕ್ಷದ (ಕನ್ಸರ್‌ವೇಟಿವ್ ಪಾರ್ಟಿ) 148 ಮಂದಿ ಸಂಸದರು ಬೋರಿಸ್ ವಿರುದ್ಧ ಮತ ಚಲಾಯಿಸಿದ್ದಾರೆ. ಅಂತಿಮವಾಗಿ ಜಾನ್ಸನ್ ಅವರು ಶೇ 58.6 ಮತ ಪಡೆಯುವ ಮೂಲಕ ವಿಶ್ವಾಸಮತ ಗೆದ್ದಿದ್ದಾರೆ.
PublicNext
07/06/2022 08:33 am