ಇಸ್ಲಾಮಾಬಾದ್: ದೆಹಲಿ ಬಿಜೆಪಿಯಲ್ಲಿ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿದ್ದ ನೂಪುರ್ ಶರ್ಮಾ ಅವರು ಟಿವಿ ಸಂವಾದವೊಂದರಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ಹೊರ ಹಾಕಿದ್ದಾರೆ.
'ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಭಾರತದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಮತ್ತು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಪಾಕಿಸ್ತಾನದ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೆ, ಇಲ್ಲಿಯವರೆಗೆ ಭಾರತವು ತನ್ನ "ಇಸ್ಲಾಮೋಫೋಬಿಕ್ ನೀತಿಗಳಿಂದ" ಹೊರಬರಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.
ಇದಕ್ಕೂ ಮುನ್ನ ಕತಾರ್ ಮತ್ತು ಕುವೈತ್ ಸೇರಿದಂತೆ ದೇಶಗಳು ಈ ಹೇಳಿಕೆಗಳ ಮೇಲೆ ಭಾರತೀಯ ರಾಯಭಾರಿಗಳಿಗೆ ಸಮನ್ಸ್ ನೀಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕತಾರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಬಿಜೆಪಿ ನಾಯಕರ ಹೇಳಿಕೆಗಳು ಯಾವುದೇ ರೀತಿಯಲ್ಲಿಯೂ ಸರ್ಕಾರದ ದೃಷ್ಟಿಕೋನವನ್ನು ಪ್ರತಿನಿಧಿಸುವುದಿಲ್ಲ, ಇವು ಪ್ರಧಾನವಲ್ಲದ ಅಂಶಗಳು ಎಂದು ಹೇಳಿದ್ದರು.
PublicNext
09/06/2022 01:05 pm