ಮ್ಯೂನಿಚ್ : ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶ ವಿದೇಶಗಳಲ್ಲಿಯೂ ಭಾರಿ ಜನಮನ್ನಣೆ ಗಳಿಸಿದ ಪ್ರಧಾನಿಯಾಗಿದ್ದಾರೆ.
ಸದ್ಯ ಎರಡು ದಿನದ ಜರ್ಮನಿ ಪ್ರವಾಸದಲ್ಲಿರುವ ಮೋದಿ ಅವರನ್ನು ಮಾತನಾಡಿಸಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಓಡೋಡಿ ಬಂದ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ.
ಇನ್ನು ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹುಡುಕಿಕೊಂಡು ಬಂದ ಮಾತನಾಡಿಸಿದ ಘಟನೆ ನಿಜಕ್ಕೂ ಮರೆಯದಂತಿದೆ.
ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ, ಪರಿಸರ ಮತ್ತು ಪ್ರಜಾಪ್ರಭುತ್ವದ ಕುರಿತು ಮಾತನಾಡಲಿದ್ದಾರೆ. ಸಭೆಗೂ ಮುನ್ನ ಆಹ್ವಾನಿತ ದೇಶದ ನಾಯಕರ ಜೊತೆ ಪ್ರಧಾನಿ ಮೋದಿ ಅನೌಪಚಾರಿಕ ಮಾತುಕತೆ ನಡೆಸಿದ್ದರು. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಜೊತೆ ಮಾತನಾಡುತ್ತಿದ್ದ ವೇಳೆ, ಜೋ ಬೈಡೆನ್ ಮೋದಿಯನ್ನು ಹುಡುಕುತ್ತಾ ಬಂದಿದ್ದಾರೆ.
PublicNext
27/06/2022 07:51 pm