ನ್ಯೂಯಾರ್ಕ್: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧಿಸೋದಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರೋಕ್ಷವಾಗಿ ಹೇಳಿದ್ದಾರೆ. ಎಲ್ಲರೂ ನಾನು ಮತ್ತೊಮ್ಮೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ. ಆದರೆ ಈ ನಿರ್ಧಾರ ಒಂದೆರಡು ಜನರಿಗೆ ಬೇಸರ ತರಬಹುದು ಎಂದು ಟ್ರಂಪ್ ಹೇಳಿದ್ದಾರೆ.
2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಜೋ ಬೈಡೆನ್ ವಿರುದ್ಧ ತಮ್ಮ ಸೋಲನ್ನು ಒಪ್ಪಿಕೊಳ್ಳದ 76 ವರ್ಷದ ರಿಪಬ್ಲಿಕನ್ ನಾಯಕ, "ನಾವು ಸೋತಿಲ್ಲ" ಎಂದು ಪ್ರತಿಪಾದಿಸಿದ್ದಾರೆ.
"ಎಲ್ಲರೂ ನಾನು ಸ್ಪರ್ಧಿಸಬೇಕೆಂದು ಬಯಸುತ್ತಾರೆ. ನಾನು ಚುನಾವಣೆಯನ್ನು ಮುನ್ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನ ಈ ನಿರ್ಧಾರದಿಂದ ಬಹಳಷ್ಟು ಜನಕ್ಕೆ ಸಂತೋಷವಾಗುತ್ತದೆ ಎಂದು ನಾನು ಭಾವಿಸಿದ್ದೇನೆ" ಎಂದು ಟ್ರಂಪ್ ನ್ಯೂಜೆರ್ಸಿಯ ಬೆಡ್‌ಮಿನ್‌ಸ್ಟರ್‌ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
PublicNext
09/09/2022 09:09 am