ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುತೂಹಲ ಮೂಡಿಸಿದ ಕಲಾಪ : ಸಿಎಂ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಎರಡು ಪಕ್ಷ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.

ಇಂದು ಸದನದಲ್ಲಿ ವಿಶ್ವಾಸ ಸಾಬೀತು ಮಾಡಬೇಕಾದ ಹಿನ್ನೆಲೆಯಲ್ಲಿ ಕಲಾಪ ಸಾಕಷ್ಟು ಕುತೂಹಲ ಮೂಡಿಸಿದೆ.

ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಇದಕ್ಕೆ ಕಾಂಗ್ರೆಸ್ ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದ್ದರು. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದ ಸ್ಪೀಕರ್ ಕಾಗೇರಿ, ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದರು.

ಹಾಗಾಗಿ ಸಿಎಂ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆ ನಡೆಯಲಿದೆ.

ಜೊತೆಗೆ ವಿಧಾನ ಮಂಡಲ ಅಧಿವೇಶನ ಕೊನೆಯ ದಿನವಾದ ಇಂದು ವಿಧಾನ ಪರಿಷತ್ ನಲ್ಲಿ ವಿಧಾನಸಭೆಯಿಂದ ಅಂಗೀಕಾರವಾಗಿರುವ 9 ವಿಧೇಯಗಳು ಮಂಡನೆಯಾಗಲಿವೆ.

Edited By : Nirmala Aralikatti
PublicNext

PublicNext

26/09/2020 10:36 am

Cinque Terre

70.04 K

Cinque Terre

3