ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. 2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರನ್ನು ನೇಮಿಸಲು ನಿರ್ಧರಿಸಲಾಗಿದೆ.

ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ ತಾಲೂಕಿನ ಒಳಗೆ ಅಗತ್ಯ ಖಾಲಿ ಇರುವ ಶಾಲೆಯಲ್ಲಿ ಮುಂದುವರೆಸಲು ನಿಯಮಾನುಸಾರ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಇನ್ನು ಅತಿಥಿ ಶಿಕ್ಷಕರ ನೇಮಕಾತಿಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

Edited By : Nagaraj Tulugeri
PublicNext

PublicNext

05/11/2021 12:58 pm

Cinque Terre

116.14 K

Cinque Terre

3

ಸಂಬಂಧಿತ ಸುದ್ದಿ