ಬೆಂಗಳೂರು: ಸರ್ಕಾರಿ ಪ್ರಾಥಮಿಕ ಅಥವಾ ಪೌಢ ಶಾಲಾ ಶಿಕ್ಷಕರಾಗಲು ಸಿದ್ಧತೆ ನಡೆಸಿರುವ ಅಭ್ಯರ್ಥಿಗಳಿಗೆ ಸಚಿವ ಎಸ್.ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ.
ಸುರೇಶ್ ಕುಮಾರ್ ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಸಭೆಯಲ್ಲಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, 'ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಶಿಕ್ಷಕ ಮಿತ್ರ ಆ್ಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ, 2,500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 3,008 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮುಖ್ಯೋಪಾಧ್ಯಾಯರಾಗಿ ಬಡ್ತಿ, 2,404 ಪ್ರೌಢಶಾಲಾ ಶಿಕ್ಷಕರಾಗಿ, 1,342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 40 ಮಂದಿ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.
PublicNext
27/01/2021 06:12 pm