ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 1,529 ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಶ್ರಿರಾಮುಲು, ರಾಜ್ಯದ 15 ಚೆಕ್ ಪೋಸ್ಟ್ ಗಳಲ್ಲಿ 37 ಹುದ್ದೆಗಳು ಇವೆ. ಇವುಗಳಲ್ಲಿ 29 ಹುದ್ದೆ ಖಾಲಿಯಿದ್ದು, ಸಾರಿಗೆ ಇಲಾಖೆಯ ಪ್ರಮುಖ ಹುದ್ದೆಗಳಲ್ಲಿ 1,529 ಖಾಲಿ ಇವೆ.ಈ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
PublicNext
25/09/2021 08:20 am