ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಧ್ವಜ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಸ್ವಾಗತಿಸಿದರು.
ಈ ಮೂಲಕ ಡಾ.ರಾಜೇಶ್ ಗೌಡ ಅವರು ಶನಿವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾದಿ ಸೇರ್ಪಡೆಗೊಂಡರು.
ಬಳಿಕ ಮಾತನಾಡಿದ ನಳಿನ್ ಕುಮಾರ್, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರದ ಉಪ ಚುನಾವಣೆ ಮತ್ತು ಮೇಲ್ಮನೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ.
ಏಕಾಂಗಿ ಎನಿಸಿಕೊಂಡಿದ್ದ ಬಿಜೆಪಿ ಇದೀಗ 12 ಕೋಟಿ ಸದಸ್ಯರನ್ನು ಹೊಂದಿ ವಿಶ್ದದ ಅತೀ ದೊಡ್ಡ ರಾಜಕೀಯ ಸಂಘಟನೆಯಾಗಿದೆ ಎಂದು ಹೇಳಿದ್ದಾರೆ.
ಶಿರಾದಲ್ಲಿ ರಾಜೇಶ್ ಗೌಡ ಪರಿಚಿತ ಮುಖವಾಗಿದ್ದು, ಬಲವಾದ ರಾಜಕೀಯ ಹಿನ್ನಲೆಯಲನ್ನು ಹೊಂದಿರುವವರಾಗಿದ್ದಾರೆ.
PublicNext
04/10/2020 09:19 am