ಕುರುಕ್ಷೇತ್ರ: ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಿದ್ದರೆ, ಕೇವಲ 15 ನಿಮಿಷಗಳಲ್ಲಿ ಲಡಾಖ್ ಗಡಿಯಿಂದ ಚೀನಾ ಹಿಂಮ್ಮೆಟ್ಟುತ್ತಿದ್ದೇವು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಹರಿಯಾಣದ ಕುರುಕ್ಷೇತ್ರದಲ್ಲಿ ಮಾತನಾಡಿದ ರಾಗಾ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಡಾಖ್ ಗಡಿ ಘರ್ಷಣೆಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಲಡಾಖ್ ಗಡಿಯಲ್ಲಿ ಸುಮಾರು 1,200 ಚ.ಕಿ.ಮೀ ಪ್ರದೇಶದಲ್ಲಿ ಚೀನಾ ಅತಿಕ್ರಮಣ ಮಾಡಿದೆ.
ಆದರೆ ನಮ್ಮ ಹೇಡಿ ಪ್ರಧಾನಿ ಒಂದಿಂಚು ಭೂಮಿಯನ್ನೂ ಯಾರೂ ಅತಿಕ್ರಮಿಸಿಕೊಂಡಿಲ್ಲ ಎಂದು ಸುಳ್ಳು ಹೇಳುವ ಮೂಲಕ ಜನರಿಗೆ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೋದಿ, ಗಡಿಯಲ್ಲಿ ಚೀನಾ ನಮ್ಮ ನೆಲವನ್ನು ಅತಿಕ್ರಮಣ ಮಾಡಿಕೊಂಡಿರುವುದನ್ನು ಒಪ್ಪಿಕೊಳ್ಳದೇ ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ವಾಸ್ತವ ನಿಯಂತ್ರಣ ರೇಖೆ(ಎಲ್ಎಸಿ)ಯಲ್ಲಿ ಚೀನಾವನ್ನು ಹದ್ದುಬಸ್ತಿನಲ್ಲಿ ಇಡಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಭರವಸೆ ನೀಡಿದರು.
PublicNext
07/10/2020 10:41 am