ಬೆಂಗಳೂರು: ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಬರಮಾಡಿಕೊಂಡರು.
ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ.
ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ. ಪರಮೇಶ್ವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
PublicNext
04/10/2020 01:02 pm