ಬೆಂಗಳೂರು : ದಿವಂಗತ ಡಿ ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕುಸುಮಾ ಹಾಗೂ ಅವರ ತಂದೆ ಹನುಮಂತರಾಯಪ್ಪ ಜೊತೆ ಕಾಂಗ್ರೆಸ್ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಪಕ್ಷ ಸೇರುವ ಬಗ್ಗೆ ಖುದ್ದು ಕುಸುಮಾ ಅವರ ಅಭಿಪ್ರಾಯವನ್ನ ನಾಯಕರು ಆಲಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹನುಮಂತರಾಯಪ್ಪ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದೇವೆ.
ಮೊದಲಿಂದಲೂ ನಾವು ಈ ಕುಟುಂಬದ ಹಿತೈಷಿಗಳು. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಅವರು ನಾಳೆ ಕಾಂಗ್ರೆಸ್ ಸದಸ್ಯತ್ವ ಪಡೆಯಲಿದ್ದಾರೆ.
ಆರ್.ಆರ್ ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ನಿರ್ಧಾರ ಮಾಡಲಿದೆ.
ರಾಮಲಿಂಗಾ ರೆಡ್ಡಿ ಅವರ ಸಮಿತಿ ಶಿಫಾರಸ್ಸು ಮಾಡಿರುವ ಹೆಸರುಗಳನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೊತೆ ಕುಳಿತು ಚರ್ಚೆ ಮಾಡ್ತೇವೆ.
ನಂತರ ಅಭ್ಯರ್ಥಿಯನ್ನ ಫೈನಲ್ ಮಾಡ್ತೇವೆ. ಆರ್.ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ.
ಈ ಮೂಲಕ ಪರೋಕ್ಷವಾಗಿ ಡಿ.ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಅನ್ನೋ ಸೂಚನೆ ಕೊಟ್ಟಿದ್ದಾರೆ.
PublicNext
04/10/2020 09:02 am