ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಂಧ್ರ ಹೈಕೋರ್ಟ್ ಜಡ್ಜ್ ಗಳು ಮತ್ತು ಸುಪ್ರೀಂಕೋರ್ಟ್ ಜಡ್ಜ್ ರಮಣ ವಿರುದ್ಧ ಜಗನ್ ವಾಗ್ದಾಳಿ, ಸಿಜೆಐಗೆ ಪತ್ರ

ವಿಜಯವಾಡ: ಆಂಧ್ರಪ್ರದೇಶ ಸರ್ಕಾರ ಮತ್ತು ಹೈಕೋರ್ಟ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಸಮರಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮುಖ್ಯ ನ್ಯಾಯಾಧೀಶ ಎಸ್ ಎ ಬೊಬ್ಡೆ ಅವರಿಗೆ ಪತ್ರ ಬರೆದಿದ್ದು, ಸುಪ್ರೀಂಕೋರ್ಟ್ ಹಾಲಿ ನ್ಯಾಯಾಧೀಶ ಎನ್. ವಿ. ರಮಣ ತೆಲುಗು ದೇಶಂ ಪಾರ್ಟಿ ಮತ್ತು ಅದರ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಹಿತ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಜೆಐ ವಸ್ತುಸ್ಥಿತಿಯನ್ನು ಪರಿಶೀಲಿಸಬೇಕು ಮತ್ತು ರಾಜ್ಯ ನ್ಯಾಯಾಂಗದ ತಟಸ್ಥತೆಯನ್ನು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸೂಕ್ತವೆಂದು ಪರಿಗಣಿಸಬಹುದಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರ ಅಜೆಯ ಕಲಾಂ, ನ್ಯಾಯಾಧೀಶ ರಮಣ್ಣ, ಟಿಡಿಪಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡುತ್ತಿದ್ದಾರೆ. ಅವರು ಹೈದ್ರಾಬಾದಿನಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿಲ್ಲ ಎಂದು ಹೇಳಿದರು.

ಸುಪ್ರೀಂಕೋರ್ಟ್ ನ್ಯಾಯಾಧೀಶ ಹಾಗೂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ, ನ್ಯಾಯಾಧೀಶರ ವಿರುದ್ಧ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿಜೆಐಗೆ ಪತ್ರ ಬರೆದಿದ್ದು, ಸರ್ಕಾರದ ಪ್ರಯತ್ನವು ಹೈಕೋರ್ಟ್‌ನ ಕೆಲವು ನ್ಯಾಯಾಧೀಶರ ಕೃತ್ಯಗಳ ಬಗ್ಗೆ ಸುಪ್ರೀಂಕೋರ್ಟ್ ಗಮನಕ್ಕೆ ತರುವುದು ಮಾತ್ರ ಎಂದು ಸ್ಪಷ್ಪಪಡಿಸಿದೆ. ಮುಖ್ಯಮಂತ್ರಿ ಬರೆದಿರುವ ಪತ್ರವು ಸರ್ಕಾರ ನ್ಯಾಯಾಂಗದ ಬಗ್ಗೆ ಹೊಂದಿರುವ ಅಪಾರ ಗೌರವವನ್ನು ಸೂಚಿಸುತ್ತದೆ ಎಂದು ಕಲಾಂ ಹೇಳಿದರು.

Edited By : Raghavendra K G
PublicNext

PublicNext

11/10/2020 08:10 am

Cinque Terre

69.95 K

Cinque Terre

0

ಸಂಬಂಧಿತ ಸುದ್ದಿ