ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

14 ತಿಂಗಳ ಬಳಿಕ ಗೃಹಬಂಧನದಿಂದ ಮೆಹಬೂಬಾ ಮುಫ್ತಿ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ ಗೃಹ ಬಂಧನಕ್ಕೆ ಗುರಿಯಾಗಿದ್ದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಮೆಹಬೂಬಾ ಮುಫ್ತಿ ಅವರನ್ನು ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಬರೋಬ್ಬರಿ 14 ತಿಂಗಳುಗಳ ಬಳಿಕ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕಣಿವೆಯ ಮತ್ತೋರ್ವ ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಗೃಹ ಬಂಧನದಿಂದ ಮುಕ್ತಿ ಪಡೆದಂತಾಗಿದೆ.

ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಪೂರ್ತಿ ಕಪ್ಪು ಬಣ್ಣದ ವಿಡಿಯೋವನ್ನು ಹಂಚಿಕೊಂಡು, ಆಡಿಯೋ ಮೆಸೇಜ್ ಮೂಲಕ ಕಿಡಿಕಾರಿದ್ದಾರೆ. "ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ 14 ತಿಂಗಳ ಬಳಿಕ ಬಿಡುಗಡೆ ಹೊಂದಿದ್ದೇನೆ. 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ಕ್ರೂರ ನಿರ್ಧಾರದ ಬಗ್ಗೆ ನಾನು ಯಾವಾಗಲೂ ಯೋಚಿಸುತ್ತಿದ್ದೇನೆ. ಸರ್ಕಾರ ವಿಶೇಷ ಸ್ಥಾನಮಾನವನ್ನು ಮರಳಿಸಬೇಕು ಹಾಗೂ ದೇಶದ ಹಲವು ಭಾಗಗಳಲ್ಲಿ ಜೈಲಿನಲ್ಲಿ ಬಳಲುತ್ತಿರುವವರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಾವೆಲ್ಲರೂ ಹೋರಾಡಬೇಕಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ.

Edited By : Vijay Kumar
PublicNext

PublicNext

14/10/2020 09:02 am

Cinque Terre

65.18 K

Cinque Terre

6

ಸಂಬಂಧಿತ ಸುದ್ದಿ