ಪಾಟ್ನಾ: ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ಬಿಹಾರದ ಕಾಂಗ್ರೆಸ್ ಪ್ರಧಾನ ಕಚೇರಿ ಸದಾಕತ್ ಆಶ್ರಮದ ಮೇಲೆ ಆದಾಯ ತೆರಿಗೆ ಅಧಿಕಾರಿ(ಐಟಿ)ಗಳು ದಾಳಿ ನಡೆಸಿದ್ದಾರೆ.
ಪಾಟ್ನಾದಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಎಂದು ನಂಬಲಾದ ಅಶುತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೆ ಕಾರಿನಲ್ಲಿದ್ದ 8.5 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಕಾಂಗ್ರೆಸ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
23/10/2020 09:42 am