ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಇಂದು ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಇನ್ನು ಕಾಂಗ್ರೆಸ್ ಕಾರ್ಯಕರ್ತರು ಅಂತ್ಯಕ್ರಿಯೆ ವೇಳೆ ಸಾಕಷ್ಟು ಹೈಡ್ರಾಮಾ ನಡೆಸಿ ಅಂತ್ಯಕ್ರಿಯೆ ತಡೆದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.
ಈ ವೇಳೆ ಬಲವಂತವಾಗಿ ಕಾಂಗ್ರೆಸ್ ನಾಯಕರನ್ನ ಅಂತ್ಯಕ್ರಿಯೆ ಸ್ಥಳದಿಂದ ಹೊರಗೆ ಕರೆದುಕೊಂಡು ಹೋದ ಸಂಬಂಧಿಕರು ಸಾಕಷ್ಟು ಅಸಮಾಧಾನ, ಆಕ್ರೋಶ, ಆಕ್ರಂದನ ಮಧ್ಯೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
PublicNext
14/04/2022 02:51 pm