ಲಕ್ನೋ: ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಪ್ರಮುಖ ಹೆಜ್ಜೆಯೊಂದನ್ನು ಇಟ್ಟಿದೆ.
ಉತ್ತರ ಪ್ರದೇಶದ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿ ವಿವಾಹವಾಗಿದ್ದ. ಈ ಸಂಬಂಧ ಯುವತಿಯ ಪೋಷಕರು ಸಲ್ಲಿಸಿದ್ದ ದೂರನ್ನು ಅಲಹಾಬಾದ್ ಹೈಕೋರ್ಟ್ ದ್ವಿಸದಸ್ಯ ಪೀಠವು ರದ್ದುಗೊಳಿಸಿತ್ತು. ಜೊತೆಗೆ ವೈಯಕ್ತಿಕ ಆಯ್ಕೆಯ ಸ್ವಾತಂತ್ರ್ಯದ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತೀರ್ಪು ನೀಡಿತ್ತು. ಈ ಬೆನ್ನಲ್ಲೇ ಉತ್ತರ ಪ್ರದೇಶದ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ವರದಿಯಾಗಿದೆ.
PublicNext
24/11/2020 07:20 pm