ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್.ವಿಶ್ವನಾಥ್‌ಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್

ಬೆಂಗಳೂರು: ಮಂತ್ರಿಗಿರಿ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಬಿಗ್‌ ಶಾಕ್ ನೀಡಿದೆ.

2021ರವರೆಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ.

ಹೆಚ್.ವಿಶ್ವನಾಥ್, ಆರ್.ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠವು, 2021ರವರೆಗೆ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಇದನ್ನು ಸಿಎಂ ಪರಿಗಣಿಸಬೇಕು ಎಂದು ಮಹತ್ವದ ಆದೇಶ ನೀಡಿದೆ.

ಹಳ್ಳಿಹಕ್ಕಿ ವಿಶ್ವಾನಾಥ್ ಅವರಿಗೆ ಬಿಗ್ ಶಾಕ್ ನೀಡಿರುವ ಹೈಕೋರ್ಟ್ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್.ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ.

Edited By : Vijay Kumar
PublicNext

PublicNext

30/11/2020 06:05 pm

Cinque Terre

112.44 K

Cinque Terre

5

ಸಂಬಂಧಿತ ಸುದ್ದಿ