ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಮತ್ತೆ ಒಂದು ದಿನ ಸಿಬಿಐ ವಶಕ್ಕೆ ನೀಡಲಾಗಿದೆ.
ಜಾಮೀನು ಕೋರಿ ರೋಷನ್ ಬೇಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ಸಿಬಿಐ ಕೋರಿಕೆಯ ಮೇರೆಗೆ 1 ದಿನಗಳ ವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ. ಜೊತೆಗೆ ಡಿಸೆಂಬರ್ 4ಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ.
ಈ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಿದ್ದ ರೋಷನ್ ಬೇಗ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
PublicNext
01/12/2020 06:41 pm